June 28, 2026
Sunday, June 28, 2026
spot_img

ನಿಯಂತ್ರಣ ತಪ್ಪಿ 150 ಅಡಿ ಆಳದ ಬಾವಿಗೆ ಬಿದ್ದ ಟ್ಯಾಂಕರ್: ಸ್ಥಳದಲ್ಲೇ ಕೊನೆಯುಸಿರೆಳೆದ ಚಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ಖಾನೆಯೊಂದರ ತ್ಯಾಜ್ಯವನ್ನು (ವೇಸ್ಟ್) ಸಾಗಿಸುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬರೋಬ್ಬರಿ 150 ಅಡಿ ಆಳದ ಬಾವಿಗೆ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಟ್ಯಾಂಕರ್ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತ ಚಾಲಕನ ಗುರುತು

ಮೃತ ದುರ್ದೈವಿಯನ್ನು ಮಂಜುನಾಥ ಆಟವಾಳಕರ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದ ನಿವಾಸಿಯಾಗಿದ್ದು, ಟ್ಯಾಂಕರ್ ಚಾಲಕನಾಗಿ ವೃತ್ತಿ ನಿರ್ವಹಿಸುತ್ತಿದ್ದರು. 150 ಅಡಿ ಆಳದ ಬಾವಿಗೆ ಬಿದ್ದ ತೀವ್ರ ಆಘಾತದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಆಳವಾದ ಬಾವಿಯಿಂದ ಮೃತದೇಹ ಹಾಗೂ ಅಪಘಾತಕ್ಕೀಡಾದ ಟ್ಯಾಂಕರ್ ಅನ್ನು ಹೊರತೆಗೆಯಲು ಭರದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !