September 8, 2026
Tuesday, September 8, 2026
spot_img

ರಾಮ ಮಂದಿರ ದೇಣಿಗೆ ವಿವಾದ | ಅಂಥಾ ಅರ್ಜೆಂಟೇನಿಲ್ಲ ಎಂದು ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣದ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಈ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯ ಇಲ್ಲ ಎಂದು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದ್ರೇಶ್ ಮತ್ತು ಶೀಲ್ ನಾಗು ಅವರ ರಜಾ ಪೀಠ (ದ್ವಿಸದಸ್ಯ ಪೀಠ), ನ್ಯಾಯಾಲಯದ ಬೇಸಿಗೆ ರಜೆಯ ಬಳಿಕ ನಿಯಮಿತ ಪೀಠದ ಮುಂದೆ ಪಟ್ಟಿ ಮಾಡುವಂತೆ ನಿರ್ದೇಶನ ನೀಡಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ವೀಕರಿಸಿದ ದೇಣಿಗೆಗಳ ದುರುಪಯೋಗದ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ತುರ್ತು ವಿಚಾರಣೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಗೋಸ್ವಾಮಿ, ಎಲೆಕ್ಟ್ರಾನಿಕ್ ಸಾಕ್ಷ್ಯಗಳು ನಾಶವಾಗುವ ಸಾಧ್ಯತೆ ಇದೆ. ಹಾಗಾಗಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಜೊತೆಗೆ ಸುಪ್ರೀಂ ಮೇಲ್ವಿಚಾರಣೆಯಲ್ಲಿ ಕೇಂದ್ರ ತನಿಖಾ ದಳದ ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಅದಾಗ್ಯೂ ಕೋರ್ಟ್‌ ತುರ್ತು ವಿಚಾರಣೆ ನಡೆಸಲು ನಿರಾಕರಿಸಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !