October 10, 2026
Saturday, October 10, 2026
spot_img

ನಂದಿಬೆಟ್ಟದ ಹೋಮ್‌ಸ್ಟೇನಲ್ಲಿ ದುರಂತ: ಯುವತಿಯ ಶ*ವ ಪತ್ತೆ, ಯುವಕನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಂದಿಬೆಟ್ಟ ಸಮೀಪದ ಹೋಂಸ್ಟೇಯೊಂದರಲ್ಲಿ ಯುವತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಪ್ರಕರಣದಲ್ಲಿ ಯುವತಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಹೋಂಸ್ಟೇಯಲ್ಲಿ ಬಯಲಾದ ದುರಂತ

ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ ಸಂಜಿತ್ ಅಲಿ ಕಳೆದ ಶನಿವಾರ ಹೋಂಸ್ಟೇಗೆ ಬಂದು ತಂಗಿದ್ದರು. ನಿಗದಿತ ಸಮಯದ ಬಳಿಕವೂ ಕೊಠಡಿ ತೆರೆಯದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ:

ಪ್ರಿಯಕರ ಆಸ್ಪತ್ರೆಗೆ ದಾಖಲು

ಸಂಜಿತ್ ಅಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕೇರಳದ ಕೋಝಿಕ್ಕೋಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ತನಿಖೆಗೆ ಸಿಕ್ಕ ಪ್ರಮುಖ ಸುಳಿವು

ಘಟನಾ ಸ್ಥಳದಲ್ಲಿ ಕೆಲವು ಮಾತ್ರೆಗಳು ಹಾಗೂ ವೈಯಕ್ತಿಕ ಡೈರಿ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣವೇನು ಎಂಬುದನ್ನು ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕವೇ ಸ್ಪಷ್ಟಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಭಿ ತಾಯಿ ಗೀತಾ, ಇದು ಸಾಮಾನ್ಯ ಘಟನೆ ಅಲ್ಲ ಎಂದು ಆರೋಪಿಸಿದ್ದು, ಮಗಳ ಮೇಲೆ ಕಿರುಕುಳ ನೀಡಲಾಗುತ್ತಿತ್ತು ಎಂದು ಹೇಳಿದ್ದಾರೆ. ಈ ಆರೋಪಗಳನ್ನೂ ಪೊಲೀಸರು ತನಿಖೆಯ ಭಾಗವಾಗಿ ಪರಿಶೀಲಿಸುತ್ತಿದ್ದಾರೆ.

Must Read