June 29, 2026
Monday, June 29, 2026
spot_img

ಆಧ್ಯಾತ್ಮಿಕ ಸೇವೆಗೆ ರಾಷ್ಟ್ರೀಯ ಗೌರವ: ಮಾದಾರ ಚನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜೀಯವರಿಗೆ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಪ್ರಧಾನ ಮಾಡಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ 2 ಲಕ್ಷ ರೂ. ನಗದು ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಹಣಕಾಸು ವಿಭಾಗದ ಮಾಜಿ ಮುಖ್ಯಸ್ಥರು ಹಾಗೂ ಅಕ್ಷಯಪಾತ್ರೆ ಯೋಜನೆಯ ಸಹ ಸಂಸ್ಥಾಪಕ ಟಿ.ವಿ.ಮೋಹನದಾಸ್ ಪೈ, ರಾಜ್ಯದ ಅರಣ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು.

ಇದನ್ನೂ ಓದಿ:

ಉಳಿದಂತೆ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ಆಡಳಿತ, ಶಿಕ್ಷಣ, ಸಂಸ್ಕೃತಿ, ಕೃಷಿ, ಪತ್ರಿಕೋದ್ಯಮ, ಸಾಹಿತ್ಯ, ಸಂಶೋಧನೆ,-ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ 15 ಮಂದಿ ಅರ್ಹರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ. ಅದರಂತೆ ಎಸ್.ವಿ.ರಂಗನಾಥ್, ಎಚ್.ಎ.ರಂಗನಾಥ್, ಎಂ.ಆರ್.ಜೈಶಂಕರ್, ಬಿ.ಎಂ.ಕೊಕರೆ, ಡಾ.ವಾಮ ದೇವಪ್ಪ, ಕೇಶವ ಆಯ್ಕೆ, ವಿಕ್ರಮ್ ಮುತ್ತಣ್ಣ, ಜಯಪ್ರಕಾಶ್ ಗೌಡ, ರವಿಕುಮಾರ್, ಯಶಸ್ವಿನಿ ಶರ್ಮ, ಪ್ರೇಮಾ ಗಣೇಶ್, ರಶ್ಮಿ ಸಾವಂತ್, ತ್ರಿಸ್ಟಾ ರಾಮಮೂರ್ತಿ, ಧರ್ಮೇಂದ್ರ, ಮಹೇಶ್ ಗೌಡ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳು ಸಾನಿಧ್ಯ ವಹಿಸಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ವಿಪಕ್ಷ ನಾಯಕ ಆರ್.ಅಶೋಕ್, ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಎಂ.ಕೃಷ್ಣೇಗೌಡ, ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !