June 29, 2026
Monday, June 29, 2026
spot_img

₹2,000 ಕೋಟಿ ಅನುದಾನಕ್ಕೆ ರಾಜಕೀಯ ಕಾವು: ಸರ್ಕಾರ-ವಿಪಕ್ಷದ ನಡುವೆ ಆರೋಪ-ಪ್ರತ್ಯಾರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿಯ 28 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹2,000 ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರ ಹಂಚಿಕೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಕ್ರಮವನ್ನು ಬಿಜೆಪಿ ಪ್ರಶ್ನಿಸಿದರೆ, ಕಾಂಗ್ರೆಸ್ ತಿರುಗೇಟು ನೀಡಿದೆ.

ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ

ಒಟ್ಟು ಅನುದಾನದಲ್ಲಿ ₹1,631 ಕೋಟಿಯನ್ನು ರಸ್ತೆ, ಚರಂಡಿ ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ ₹369 ಕೋಟಿಯನ್ನು ಉದ್ಯಾನಗಳು, ಸಮುದಾಯ ಭವನಗಳು, ಆರೋಗ್ಯ, ಶಿಕ್ಷಣ, ಕ್ರೀಡಾ ಸೌಲಭ್ಯಗಳು, ಮಾರುಕಟ್ಟೆ ಹಾಗೂ ಕೆರೆಗಳ ಅಭಿವೃದ್ಧಿಗೆ ಬಳಸಲು ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ:

ತಾರತಮ್ಯ ಆರೋಪ

ವಿಪಕ್ಷ ನಾಯಕ ಆರ್. ಅಶೋಕ್, ಆಡಳಿತ ಪಕ್ಷದ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ತೆರಿಗೆದಾರರ ಹಣವನ್ನು ರಾಜಕೀಯ ಆಧಾರದ ಮೇಲೆ ಹಂಚಬಾರದು ಎಂದು ಒತ್ತಾಯಿಸಿದ್ದು, ಬೆಂಗಳೂರಿನ ರಸ್ತೆ, ಟ್ರಾಫಿಕ್ ಹಾಗೂ ಪ್ರವಾಹ ಸಮಸ್ಯೆಗಳತ್ತ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ತಿರುಗೇಟು

ಸಚಿವ ಎಂ.ಬಿ. ಪಾಟೀಲ್, ಬಿಜೆಪಿ ಅಧಿಕಾರದಲ್ಲಿದ್ದಾಗಲೂ ವಿರೋಧ ಪಕ್ಷದ ಕ್ಷೇತ್ರಗಳಿಗೆ ಕಡಿಮೆ ಅನುದಾನ ನೀಡಲಾಗಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ. ಹಿಂದಿನ ಸರ್ಕಾರದ ಅನುದಾನ ಹಂಚಿಕೆಯನ್ನು ಪರಿಶೀಲಿಸಿದ ಬಳಿಕವೇ ಆರೋಪ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !