August 25, 2026
Tuesday, August 25, 2026
spot_img

ಫೋಟೊ ತೆಗೆಯುವ ವಿಚಾರಕ್ಕೆ ಕಿರಿಕ್‌: ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಯುವಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಧಾನಸೌಧದ ಮುಂದೆ ಫೋಟೊ ತೆಗೆಸಿಕೊಳ್ಳುವಾಗ ಅಡ್ಡ ಬಂದರು ಎನ್ನುವ ಕಾರಣಕ್ಕೆ ಎರಡು ಗುಂಪಿನ ನೇಪಾಳಿ ಯುವಕರ ನಡುವೆ ಗಲಾಟೆ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ವಿಧಾನಸೌಧದ ಹೊರಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದ್ದು, ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಗಲಾಟೆಯಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ಪಡೆದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !