June 30, 2026
Tuesday, June 30, 2026
spot_img

ಬೆಳಗಾವಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಗಮನ: ಅದ್ಧೂರಿ ಸ್ವಾಗತ

ಹೊಸದಿಗಂತ ವರದಿ ​ಬೆಳಗಾವಿ:

ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ರಾತ್ರಿವೇಳೆ ಬೆಳಗಾವಿ ಜಿಲ್ಲೆಗೆ ಆಗಮಿಸಿದರು.

​ನಗರಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಐಜಿಪಿ ಸಂದೀಪ್ ಪಾಟೀಲ್ ಅವರು ಪುಷ್ಪಗುಚ್ಛ ನೀಡುವ ಮೂಲಕ ಆದರಪೂರ್ವಕವಾಗಿ ಬರಮಾಡಿಕೊಂಡರು.

​ಈ ವೇಳೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು. ಉಪ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಬುಧವಾರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಪ್ರಮುಖ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.‌

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !