August 19, 2026
Wednesday, August 19, 2026
spot_img

BREAKING | ಮಂಗಳೂರಿನಲ್ಲಿ ಭಾರೀ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ, ಇಬ್ಬರು ಮಕ್ಕಳು ಸೇರಿ ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿ ಭಾರೀ ಮಳೆ ಸುರಿದಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಚಾವಣಿಯೊಂದು ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ಆರು ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ.

ಬೆಳಗಿನ ಜಾವ ಎಲ್ಲರೂ ನಿದ್ದೆಯಲ್ಲಿದ್ದ ವೇಳೆ ಛಾವಣಿ ಕುಸಿದು ಬಿದ್ದಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ರಕ್ಷಿಸಲಾಗಿದೆ. ಅವಘಡದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !