August 25, 2026
Tuesday, August 25, 2026
spot_img

ಕಲ್ಲು ಕ್ವಾರಿಯಲ್ಲಿ ಕಾರ್ಮಿಕರ ಸಾವಿಗೆ ಸಿಎಂ ಸಂತಾಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣ ಗ್ರಾಮದ ಬಳಿ ದುರಂತ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

7 ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ.

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !