September 4, 2026
Friday, September 4, 2026
spot_img

ಕಲ್ಲು ಕ್ವಾರಿ ದುರಂತಕ್ಕೆ ಸಂಬಂಧಿಸಿದ ಅಧಿಕೃತ ವರದಿ ಬಂದ ನಂತರ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಗಡಿ ರಸ್ತೆ ಬಳಿ ಕಲ್ಲು ಕ್ವಾರಿ ದುರಂತದಲ್ಲಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಈ ದುರಂತ ಸಂಭವಿಸಿಲ್ಲ ಎಂಬ ಮಾಹಿತಿ ಬಂದಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು ನಂತರ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದ್ದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು ಎಂದಿದ್ದಾರೆ.

ಕಳೆದ ಬಾರಿ ಸ್ಫೋಟದ ವೇಳೆ ಚಿರತೆ ಸತ್ತಿತ್ತು. ಈ ಹಿಂದೆ ತನಿಖೆ ಮಾಡದೇ ಪ್ರಕರಣ ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಬಗ್ಗೆ ಕೇಳಿದಾಗ, ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !