ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯನ್ನು ಖಂಡಿಸಿ ಇಂದು ಪ್ರತಿಭಟನೆ ನಡೆದಿದ್ದು, ಅದರಲ್ಲಿಯೂ ಮತ್ತೆ ಕಲ್ಲು ತೂರಾಟ ಆಗಿದೆ.
ಈ ಅವಘಡದಲ್ಲಿ ತಪ್ಪು ಯಾರದ್ದೇ ಇರಲಿ ಅವರಿಗೆ ಮುಲಾಜಿಲ್ಲದೆ ಶಿಕ್ಷೆ ಕೊಡಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿಗೆ ಕರೆ ಮಾಡಿ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ ಎಂದು ಹೇಳಿದ್ದಾರೆ.
ಮದ್ದೂರು ಕಲ್ಲು ತೂರಾಟ: ಕಠಿಣ ಕ್ರಮ ಕೈಗೊಳ್ಳಿ ಎಂದ ಎಚ್‌ಡಿಕೆ
