September 2, 2026
Wednesday, September 2, 2026
spot_img

ಮುಖ್ಯಮಂತ್ರಿ ವಿಜಯ್ ವಿರುದ್ಧ ಮಾನಹಾನಿಕರ ಹೇಳಿಕೆ: ಮಾಜಿ ಸಚಿವ ಅನಿತಾ ರಾಧಾಕೃಷ್ಣನ್ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಡಿಎಂಕೆ ಮಾಜಿ ಸಚಿವ ಅನಿತಾ ಆರ್ ರಾಧಾಕೃಷ್ಣನ್ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಥೂರ್‌ಗೆ ಭೇಟಿ ನೀಡಿದ್ದ ವೇಳೆ ಅವರನ್ನು ಬಂಧಿಸಿದ ಪೊಲೀಸರು, ಪೊಲೀಸ್ ಜೀಪ್‌ನತ್ತ ಕರೆದೊಯ್ದರು. ರಾಧಾಕೃಷ್ಣನ್ ಅವರ ಬೆಂಬಲಿಗರು ಜಮಾಯಿಸಿ ಪೊಲೀಸರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಶಾಸಕರೊಬ್ಬರ ವಿರುದ್ಧ ಮಹಿಳೆಯೊಬ್ಬರು ಸಲ್ಲಿಸಿದ ದೂರಿನ ಕುರಿತು ಆಡಳಿತಾರೂಢ ಟಿವಿಕೆ ಯಾವುದೇ ಕ್ರಮ ಕೈಗೊಳ್ಳದಿರುವಾಗ, ತಮ್ಮ ಕ್ಷೇತ್ರದಲ್ಲಿ ಪರಿಶೀಲನೆ ನಡೆಸುತ್ತಿದ್ದ ರಾಧಾಕೃಷ್ಣನ್ ಅವರನ್ನು ಬಂಧಿಸುವ ತುರ್ತು ಅಗತ್ಯ ಏನಿತ್ತು ಎಂದು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಪ್ರಶ್ನಿಸಿದರು.

ಈ ಅವಸರ ಏಕೆ? ಮಹಿಳೆಯರ ಮೇಲಿನ ಲೈಂಗಿಕ ಅಪರಾಧಗಳು, ಹತ್ಯೆಗಳು ಮತ್ತು ದರೋಡೆಗಳುನ್ನು ತಡೆಯಲು ವಿಫಲವಾಗಿರುವ ಹಾಗೂ ಇತರ ಪಕ್ಷಗಳ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳುವುದರಲ್ಲೇ ಮಗ್ನವಾಗಿರುವ ಈ ಸರ್ಕಾರವು ಖಚಿತಪಡಿಸಲು ಬಯಸುವ ಬದಲಾವಣೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ‘ಎಕ್ಸ್’ನಲ್ಲಿ ಪ್ರಶ್ನಿಸಿದ್ದಾರೆ. ಮಾನನಷ್ಟ ಮೊಕದ್ದಮೆಗಳಲ್ಲಿ ಬಂಧನಗಳು ನಡೆಯುವುದಾದರೆ, ತಮ್ಮ ಭಾಷಣಗಳಿಗಾಗಿ ಎಷ್ಟು ಸಚಿವರು ಎಷ್ಟು ಬಾರಿ ಬಂಧನಕ್ಕೊಳಗಾಗಬೇಕಾಗುತ್ತಿತ್ತು ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !