ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇತ್ತ ರಾಜ್ಯದ ಹಲವು ಭಾಗಗಳಲ್ಲಿ ಬಿಎಲ್‌ಒಗಳು ಮನೆ ಮನೆಗೆ ಹೋಗದೇ ರಸ್ತೆಯಲ್ಲಿ ಟೆಂಟ್ ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಮೈಸೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಕರ್ತವ್ಯಲೋಪದ ಆರೋಪ ಎದುರಾಗಿದೆ.
ಕೋಲಾರದಲ್ಲಿ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ ಸೇರಿದಂತೆ ಐವರು ಬಿಎಲ್‌ಒಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ನೋಟಿಸ್ ಜಾರಿ ಮಾಡಿದ್ದಾರೆ. ಇತ್ತ ಮೈಸೂರಿನಲ್ಲೂ ಮನೆ ಮನೆಗೆ ತೆರಳದೆ ನಿಯಮ ಉಲ್ಲಂಘಿಸಿ ಸಾಮೂಹಿಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇದೇ ರೀತಿಯ ಲೋಪ ಮೈಸೂರು ಜಿಲ್ಲೆಯಲ್ಲೂ ವರದಿಯಾಗಿದೆ. ಮೈಸೂರಿನ ಎನ್.ಆರ್. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್‌ಒಗಳು ಸಾರ್ವಜನಿಕ ಸ್ಥಳ ಹಾಗೂ ಮತಗಟ್ಟೆ ಕೇಂದ್ರಗಳಲ್ಲಿ ಸಾರ್ವಜನಿಕರನ್ನು ಗುಂಪುಗೂಡಿಸಿ ಸಾಮೂಹಿಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮನೆ ಮನೆಗೆ ತೆರಳಿ ಪಾರದರ್ಶಕವಾಗಿ ಪರಿಷ್ಕರಣೆ ನಡೆಸಬೇಕು ಎಂದು ಸ್ಥಳೀಯ ನಿವಾಸಿಗಳು ತೀವ್ರ ಒತ್ತಾಯ ಹೇರಿದ್ದಾರೆ.



