September 4, 2026
Friday, September 4, 2026
spot_img

ಬೆಂಗಳೂರಿನಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಿಢೀರ್‌ ದಾಳಿ, ಮಾರಕಾಸ್ತ್ರಗಳು ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಿಢೀರ್‌ ದಾಳಿ ಮಾಡಿದ್ದು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಪೂರ್ವ ವಿಭಾಗದಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಇಂದಿರಾನಗರದ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಾಕಾಸ್ತ್ರಗಳು ಕಂಡುಬಂದಿವೆ.

ಅಲ್ಲದೇ, ಅನುಮಾನಿತ ವ್ಯಕ್ತಿಗಳು ಮತ್ತು ಅವರಿಗೆ ಸೇರಿದ ವಾಹನಗಳ ತಪಾಸಣೆ ನಡೆಸಲಾಗಿದೆ. ಮೂವತ್ತಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಯಾವುದೇ ಅಪರಾಧ ಕೃತ್ಯಗಳಲ್ಲಿ ಮತ್ತೆ ಭಾಗಿಯಾದರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಸ್ಪಷ್ಟಪಡಿಸಿದೆ. ಈ ಮೆಗಾ ಆಪರೇಷನ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !