July 4, 2026
Saturday, July 4, 2026
spot_img

ನೆಟ್‌ಫ್ಲಿಕ್ಸ್‌ನಲ್ಲಿ ಅಬ್ಬರಿಸಲು ಸಿದ್ಧವಾದ ‘ಪೆದ್ದಿ’: 330+ ಕೋಟಿ ಗಳಿಸಿದ ಸಿನಿಮಾ ಸ್ಟ್ರೀಮಿಂಗ್ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಮೋಸ್ಟ್ ಎವೇಟೆಡ್ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ‘ಪೆದ್ದಿ’ ಈಗ ಒಟಿಟಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ವಿಶ್ವದಾದ್ಯಂತ ಭರ್ಜರಿ ಯಶಸ್ಸು ಕಂಡಿರುವ ಈ ಚಿತ್ರವು ಶೀಘ್ರದಲ್ಲೇ ಪ್ರಮುಖ ಒಟಿಟಿ ಪ್ಲಾಟ್‌ಫಾರ್ಮ್ ಆದ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾಗಲಿದೆ.

ಜುಲೈ 9ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್

ಮನೆಯಲ್ಲೇ ಸಿನಿಮಾ ನೋಡಲು ಕಾಯುತ್ತಿದ್ದ ಒಟಿಟಿ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಜುಲೈ 9ರಂದು ‘ಪೆದ್ದಿ’ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸ್ಟ್ರೀಮಿಂಗ್ ಆರಂಭವಾಗಲಿದ್ದು, ಹಿಂದಿ ವರ್ಷನ್ ಒಂದು ವಾರ ತಡವಾಗಿ ರಿಲೀಸ್ ಆಗಲಿದೆ.

ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ದಾಖಲೆ

ವಿಶ್ವದಾದ್ಯಂತ ಒಟ್ಟು 120,447 ಶೋಗಳ ಪ್ರದರ್ಶನ ಕಂಡಿರುವ ಈ ಸಿನಿಮಾ, ಒಟ್ಟಾರೆ ₹338.98 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. ಭಾರತದಲ್ಲಿ ₹286.08 ಕೋಟಿ ಗಳಿಸಿದ್ದರೆ, ವಿದೇಶದಿಂದ ₹52.90 ಕೋಟಿ ಹರಿದುಬಂದಿದೆ. ಚಿತ್ರದ ಒಟ್ಟು ನೆಟ್ ಕಲೆಕ್ಷನ್ ₹242.03 ಕೋಟಿ ದಾಟಿದೆ.

ಸ್ಟಾರ್ ತಾರಾಗಣ ಹಾಗೂ ತಾಂತ್ರಿಕ ತಂಡ

ಬುಚ್ಚಿ ಬಾಬು ಸನಾ ನಿರ್ದೇಶನದ ಈ ಬಿಗ್ ಬಜೆಟ್ ಸಿನಿಮಾದಲ್ಲಿ ರಾಮ್ ಚರಣ್ ಜೊತೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಕನ್ನಡದ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಹಾಗೂ ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿದ್ದಾರೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !