July 4, 2026
Saturday, July 4, 2026
spot_img

ಕೆ.ಆರ್‌ ಸರ್ಕಲ್‌ ಬಳಿ ಭೀಕರ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಭೈರತಿ ಸುರೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಬೆಳಗ್ಗೆ ಬೆಂಗಳೂರಿನ ಕೆ. ಆರ್‌. ಸರ್ಕಲ್‌ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರಿಗೆ ಗಾಯವಾಗಿತ್ತು. ಸಾರಿಗೆ ಸಚಿವ ಭೈರತಿ ಸುರೇಶ್‌ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಭೇಟಿ ನೀಡಿ ಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ.ಕೆ.ಆರ್ ಸರ್ಕಲ್‌ನಲ್ಲಿ ಬೆಳಗ್ಗೆ ಎರಡು ಇವಿ ಬಿಎಂಟಿಸಿ ನಡುವೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ 16 ಜನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇವರ ದಯೆಯಿಂದ ಕೆಲವರು ಡಿಸ್ಚಾರ್ಜ್ ಆಗ್ತಿದ್ದಾರೆ. ಮೂವರಿಗೆ ಎಂಆರ್‌ಐ, ಸಿಟಿ ಸ್ಕ್ಯಾನ್ ಮಾಡಿದಾರೆ. ಒಂದು ಬಸ್ ಸಿಗ್ನಲ್‌ನಲ್ಲಿ ನಿಂತಿತ್ತು. ಈ ವೇಳೆ ಮತ್ತೊಂದು ಬಸ್ ಹಿಂದಿನಿಂದ ಬಂದು ಗುದ್ದಿದೆ. ನಮ್ಮ ಸಿಬ್ಬಂದಿ ಗಾಯಾಳುಗಳನ್ನು ಕರೆತಂದು ಅಡ್ಮಿಟ್ ಮಾಡಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರದಿಂದ ಭರಿಸುತ್ತೇವೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !