July 4, 2026
Saturday, July 4, 2026
spot_img

ಲಕ್ಷ್ಮೀದೇವಿ ಬಗ್ಗೆ ಮಾತನಾಡಿ ಭಕ್ತರ ಕೆಂಗಣ್ಣಿಗೆ ಗುರಿಯಾದ ಆರ್ಯವರ್ಧನ್‌ ಗುರೂಜಿ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಕ್ಷ್ಮಿ ದೇವಿಯ ಬಗ್ಗೆ ಅವಹೇಳನಾಕಾರಿ ಹೇಳಿಕೆಯೊಂದನ್ನು ನೀಡಿದ ಆರೋಪದ ಮೇಲೆ ಆರ್ಯವರ್ಧನ ಗುರೂಜಿ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಗೆ ಕರ್ನಾಟಕ ಗೋರಕ್ಷಕರ ಸೇನೆ ದೂರು ನೀಡಿದ್ದು ಗುರೂಜಿ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವರ ಬಗ್ಗೆ ಹೇಳುವಾಗ ಮಾನವ ದೇಹದ ಒಂದು ಅಂಗವನ್ನು ಉಲ್ಲೇಖಿಸಿ ಪೂಜೆ ಮಾಡಬೇಕು ಎನ್ನುವ ಅರ್ಥ ಬರುವಂಥ ಮಾತುಗಳನ್ನು ಆಡಿದ್ದಾರೆ ಎಂದು ಹೇಳಲಾಗಿದೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಶಂಕರಪುರಂ ಪೊಲೀಸರು ಆರ್ಯವರ್ಧನ್ ಗುರೂಜಿಗೆ ವಿಚಾರಣೆಗೆ ಹಾಜರಾಗುವಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವಿವಾದಕ್ಕೆ ಸಂಬಂಧಿಸಿದಂತೆ ಆರ್ಯವರ್ಧನ್ ಗುರೂಜಿ ಕಡೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !