July 4, 2026
Saturday, July 4, 2026
spot_img

ಅಭಿಮಾನಿಗಳ ಹಾರೈಕೆ ಫಲಿಸಲಿಲ್ಲ! ʼಪ್ಯಾಟೆ ಮಂದಿ ಕಾಡಿಗ್‌ ಬಂದ್ರುʼ ಖ್ಯಾತಿ ಪದ್ದು ಗೌಡ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಡೆಲ್‌, ಪ್ಯಾಟೆ ಮಂದಿ ಕಾಡಿಗ್‌ ಬಂದ್ರು ಖ್ಯಾತಿಯ ಪದ್ಮನಾಭ ಕೆ.ಎಂ ಬ್ರೇನ್‌ ಟ್ಯೂಮರ್‌ನಿಂದಾಗಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ದು ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು. ಪದ್ಮನಾಭ ಗೌಡ ಅವರು ಪತ್ನಿ ಅಶ್ವಿನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಪದ್ದು ಸ್ನೇಹಜೀವಿ, ಅವರ ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ ಮಿಡಿದಿದೆ. ಕೆಲವು ದಿನಗಳ ಹಿಂದೆ ಬ್ರೇನ್‌ ಟ್ಯೂಮರ್‌ ಇರುವ ವಿಷಯ ತಿಳಿದುಬಂದಿತ್ತು. ಆದರೆ ಧೈರ್ಯಗೆಡದ ಪದ್ದು ಚಿಕಿತ್ಸೆ ಪಡೆದು ವಾಪಾಸಾಗುತ್ತೇನೆ ಎಂದುಕೊಂಡಿದ್ದರು. ಆದರೆ ಆರೋಗ್ಯ ಅವರ ಸಾಥ್‌ ನೀಡಲಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !