July 4, 2026
Saturday, July 4, 2026
spot_img

ಅಸಮಾಧಾನ ಇಲ್ಲ, ಉತ್ತಮ ಆಡಳಿತಕ್ಕಾಗಿ ಪಕ್ಷದ ಶಾಸಕರೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡ್ತಿದ್ದಾರೆ: ಯು.ಟಿ. ಖಾದರ್‌

ಹೊಸದಿಗಂತ ವರದಿ ಕಾರವಾರ:

ಸಚಿವ ಸಂಪುಟ ವಿಸ್ತರಣೆಯ ಕುರಿತಂತೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸರ್ಕಾರದ ಉತ್ತಮ ಆಡಳಿತಕ್ಕೆ ಪಕ್ಷದ ಶಾಸಕರೆಲ್ಲ ಒಗ್ಗಟ್ಟಿನಿಂದ ಕೆಲಸ
ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಗೆ ಭೇಟಿ ನೀಡದ ಅವರು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹಲವಾರು ಸಂಗತಿಗಳನ್ನು ಗಮನದಲ್ಲಿರಿಸಿ ಸಚಿವರ ಆಯ್ಕೆ
ಮಾಡಬೇಕಾಗುತ್ತದೆ ಎಲ್ಲರನ್ನೂ ಸಚಿವರನ್ನಾಗಿಸಲು ಸಾಧ್ಯವಿಲ್ಲ ಮುಂದಿನ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಸರ್ಕಾರ ನಡೆಸಲು ಶಾಸಕರೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಈಗ 34 ಸಚಿವರ ಕೆಲಸವನ್ನು 14 ಜನರು ನಿರ್ವಹಿಸುತ್ತಿದ್ದು ಸಚಿವ ಸಂಪುಟ ವಿಸ್ತರಣೆಯ ವಿಳಂಬವಾಗುತ್ತಿದೆ ಎಂದು ಪಕ್ಷದ ಯಾರಲ್ಲೂ ಅಸಮಾಧಾನ ಇಲ್ಲ ಎಂದರು.

ರಾಜ್ಯದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಚುನಾವಣಾ ಆಯೋಗದಿಂದ ನಡೆಯುತ್ತಿದ್ದು ಪ್ರತಿಯೊಂದು ತೀರ್ಮಾನ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿದೆ,ಇದರಲ್ಲಿ ಯಾರೂ ರಾಜಕೀಯ ಮಾಡಲು ಸಾಧ್ಯವಿಲ್ಲ ಈ ವಿಷಯದಲ್ಲಿ ಆರೋಪ ಮಾಡುವವರು ಚುನಾವಣಾ ಆಯೋಗಕ್ಕೆ ದೂರು ನೀಡಲಿ. ಯಾವುದೇ ಪ್ರಶ್ನೆಗಳಿದ್ದರೂ ಅದನ್ನು ಚುನಾವಣಾ ಆಯೋಗಕ್ಕೆ ಕೇಳಲಿ ಎಂದು ಸಚಿವ ಖಾದರ್ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !