September 4, 2026
Friday, September 4, 2026
spot_img

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ತರ ಸುದ್ದಿ ನೀಡಿದೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 8ರ ವರೆಗೆ ವಿಸ್ತರಿಸಲಾಗಿದೆ.

‌ಈ ಹಿಂದೆ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 3 ಕಡೆಯ ದಿನವಾಗಿತ್ತು. ಹಾಗೂ ಅರ್ಜಿ ಶುಲ್ಕ ಪಾವತಿಸಲು ಜುಲೈ 4 ಕೊನೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು. ಆದರೆ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈಗ ಎರಡೂ ಪ್ರಕ್ರಿಯೆಗಳ ದಿನಾಂಕವನ್ನು ಒಟ್ಟಿಗೆ ಜುಲೈ 8ರ ವರೆಗೆ ಮುಂದೂಡಲಾಗಿದೆ.

ಇದನ್ನೂ ಓದಿ:

ತಿದ್ದುಪಡಿ ಮಾಡಿಕೊಳ್ಳಲು ವಿಶೇಷ ಅವಕಾಶ

ಅರ್ಜಿ ಸಲ್ಲಿಸುವಾಗ ಯಾವುದಾದರೂ ತಪ್ಪು ಮಾಹಿತಿಯನ್ನು ನಮೂದಿಸಿದ್ದರೆ, ಅಂತಹ ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಜುಲೈ 10 ರಿಂದ ಜುಲೈ 13 ರ ಒಳಗೆ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಾಧಿಕಾರವು ವಿಶೇಷ ಸಮಯಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದ ಸರ್ವರ್ ಸಮಸ್ಯೆಯನ್ನು ತಪ್ಪಿಸಲು ತಕ್ಷಣವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !