ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸುತ್ತ ರಾಜಕೀಯ ವಿವಾದ ಮತ್ತು ತೀವ್ರ ಗೊಂದಲಗಳು ಮುಂದುವರಿದಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಶನಿವಾರ ತಮ್ಮ ಕುಟುಂಬ ಸಮೇತ ಈ ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು ಅಕ್ರಮದ ಆರೋಪಗಳನ್ನು ಮಾಡುತ್ತಿರುವ ನಡುವೆಯೇ, ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಬಿಎಲ್‌ಓಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಿ ಮಾದರಿಯಾಗಿದ್ದಾರೆ.
ಇದನ್ನೂ ಓದಿ:
ಗೊಂದಲದ ನಡುವೆಯೂ ಪ್ರಕ್ರಿಯೆ ಪೂರ್ಣ
ಈಗಾಗಲೇ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ನಿಯಮಬಾಹಿರವಾಗಿ ಫಾರ್ಮ್‌ಗಳನ್ನು ಹಂಚುತ್ತಿದೆ ಮತ್ತು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಗಂಭೀರ ಆಕ್ಷೇಪ ಎತ್ತಿವೆ. ಸಚಿವ ಪ್ರಲ್ಹಾದ ಜೋಶಿ ಈ ಸಂಬಂಧ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಿದ್ದಾರೆ. ಇಂತಹ ಹೈವೋಲ್ಟೇಜ್ ರಾಜಕೀಯ ಜಟಾಪಟಿ ಮತ್ತು ಗೊಂದಲಗಳ ಸನ್ನಿವೇಶದಲ್ಲೂ ಹೆಚ್‌ಡಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.



