July 5, 2026
Sunday, July 5, 2026
spot_img

ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ಬೆಳಗಾವಿ ಗಡಿ ಭಾಗದ ಸೇತುವೆಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಗಡಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ತೀವ್ರಗೊಂಡಿದೆ. ಮಳೆಯ ಆರ್ಭಟಕ್ಕೆ ನದಿ ತೀರದ ಜನರಲ್ಲಿ ಆತಂಕ ಮನೆಮಾಡಿದೆ.

ಅಪಾಯದ ಮಟ್ಟ ಮೀರಿದ ದೂದಗಂಗಾ – ವೇದಗಂಗಾ

ದೂದಗಂಗಾ ಮತ್ತು ವೇದಗಂಗಾ ನದಿಗಳು ಪ್ರಸ್ತುತ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನೀರಿನ ಮಟ್ಟ ದಿಢೀರ್ ಏರಿಕೆಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ಪ್ರಮುಖ ನಾಲ್ಕು ಕೆಳ ಹಂತದ ಸಂಪರ್ಕ ಸೇತುವೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿವೆ.

ರಸ್ತೆ ಸಂಪರ್ಕ ಕಡಿತ: ಸಾರ್ವಜನಿಕರ ಪರದಾಟ

ದೂದಗಂಗಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಕಾರದಗಾ-ಬೋಜ್ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಜಲಾವೃತಗೊಂಡಿದೆ. ಇತ್ತ ವೇದಗಂಗಾ ನದಿಯ ಅಬ್ಬರಕ್ಕೆ ಬಾರವಾಡ-ಕನ್ನೂರ ಹಾಗೂ ಬೋಜವಾಡಿ-ಗಜವರವಾಡಿ ಗ್ರಾಮಗಳ ನಡುವಿನ ಸೇತುವೆಗಳು ಮುಳುಗಿವೆ.

ಇದಲ್ಲದೆ, ಮಹಾರಾಷ್ಟ್ರ ವ್ಯಾಪ್ತಿಯ ರಾಜಾಪುರ-ಜುಗಳ ಸೇತುವೆಯೂ ನೀರಿನಲ್ಲಿ ಮುಳುಗಡೆಯಾಗಿದ್ದು, ಪ್ರಮುಖ ರಸ್ತೆ ಸಂಪರ್ಕಗಳು ಸಂಪೂರ್ಣ ಕಡಿತಗೊಂಡಿವೆ. ಇದರಿಂದಾಗಿ ಸ್ಥಳೀಯ ಗ್ರಾಮಸ್ಥರು ಪರ್ಯಾಯ ಮಾರ್ಗಗಳನ್ನು ಅವಲಂಬಿಸುವಂತಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !