Tuesday, November 11, 2025

ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ಬ್ಯಾನ್: ಸರ್ಕಾರದ ವಿರುದ್ಧ ಸಿಡಿದೆದ್ದ ನೇಪಾಳಿ ಜನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆ ತಿರುಗಿಬಿದ್ದಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರು ಬೀದಿಗಿಳಿದಾಗ ನಡೆದ ಹಿಂಸಾತ್ಮಕ ಘರ್ಷಣೆಗಳಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದೆ.

ನೇಪಾಳ ಸರ್ಕಾರ ನೋಂದಾಯಿತ 26 ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿದೆ. ಇಲ್ಲಿನ ಜನತೆಗೆ ಯೂಟ್ಯೂಬ್‌, ಎಕ್ಸ್‌, ಫೇಸ್‌ಬುಕ್‌ ಸೈಟ್‌ಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದು ಬಳಕೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಯುವ ನೇಪಾಳಿಗಳು ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿ, ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು. ದೇಶವನ್ನು ವ್ಯಾಪಿಸಿರುವ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

error: Content is protected !!