July 5, 2026
Sunday, July 5, 2026
spot_img

ಎಸ್‌ಐಆರ್ ಕಾರ್ಯದ ವೇಳೆ ಕುಸಿದು ಬಿದ್ದ ಬಿಎಲ್‌ಒ: ಚಿಕಿತ್ಸೆ ಫಲಿಸದೆ ಮೃತ್ಯು

ಹೊಸದಿಗಂತ ವರದಿ ಬೀದರ್:

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದ ವೇಳೆ ಬಿಎಲ್‌ಒ (Booth Level Officer) ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭಾಲ್ಕಿ ತಾಲೂಕಿನ ಸುನೀಲ್ (48) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಅವರು ಎಸ್‌ಐಆರ್ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಅಮಲಾಪುರ ಗ್ರಾಮದ 33ನೇ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಸ್ಥಳೀಯರು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ವೇಳೆ ಸ್ಟಂಟ್ ಅಳವಡಿಸುವ ಸಂದರ್ಭದಲ್ಲಿ ಆರೋಗ್ಯ ಸ್ಥಿತಿ ಗಂಭೀರಗೊಂಡು ಅವರು ಮೃತಪಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !