ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಥಿಕ ಸಂಕಷ್ಟ, ಬೆಲೆ ಏರಿಕೆ ಹಾಗೂ ಆಡಳಿತದ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶದಲ್ಲಿ ಭಾನುವಾರ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಪ್ರತಿಭಟನೆ ಕೆಲವೆಡೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ.
ಗುಂಡಿನ ದಾಳಿ, ಗಾಯಾಳುಗಳ ಸಂಖ್ಯೆ ಹೆಚ್ಚಳ
ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಮತ್ತು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಹಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ:
ನೂರಾರು ಕಾರ್ಯಕರ್ತರ ಬಂಧನ, ಇಂಟರ್ನೆಟ್ ಸ್ಥಗಿತ
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪ್ರಮುಖ ಸಂಘಟನೆಯ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಜೊತೆಗೆ ಮಾಹಿತಿ ವಿನಿಮಯ ನಿಯಂತ್ರಣಕ್ಕಾಗಿ ಪಿಒಕೆಯ ಹಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.



