ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಉತ್ತಮ ಆರೋಗ್ಯ ಸೇವೆಗಳ ಮೂಲಕ ಮಹಿಳೆಯರು ಮತ್ತು ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಆರಂಭಿಸಲಿದ್ದಾರೆ.
ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ತಮ್ಮ ಎಕ್ಸ್ ಪೇಜಿನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ದೇಶಾದ್ಯಂತ ಈ ಕಾರ್ಯಕ್ರಮದ ಭಾಗವಾಗಿ, ಆಯುಷ್ಮಾನ್ ಆರೋಗ್ಯ ಮಂದಿರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ 75,000 ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು.
ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಆಯೋಜಿಸಲಾಗುವ ಈ ಶಿಬಿರಗಳು ಮಹಿಳೆಯರು ಮತ್ತು ಮಕ್ಕಳಿಗೆ ಅನುಗುಣವಾಗಿ ಅಗತ್ಯ ಸೇವೆಗಳನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತವೆ.