ಹೊಸದಿಗಂತ ವರದಿ ಮಡಿಕೇರಿ:
ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವೀರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಬೇಟೋಳಿ ಗ್ರಾಮದ ನಿವಾಸಿ ಸಿಂಧು ಎಂಬವರೇ ಗಾಯಗೊಂಡವರು.
ಸೋಮವಾರ ಬೆಳಗ್ಗೆ ಸ್ಕೂಟರ್’ನಲ್ಲಿ ತೆರಳುತ್ತಿದ್ದಾಗ, ಇದ್ದಕ್ಕಿದ್ದಂತೆ ಮರ ಅವರ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಸಿಂಧು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಅವರನ್ನು ರಕ್ಷಿಸಿ ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.



