ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮುದ್ದಾಮಾರಿ ಮಳೆಯಿಂದಾಗಿ ಸೋಮವಾರದ ಮಹಾರಾಷ್ಟ್ರ ವಿಧಾನಸಭೆ ಅಧಿವೇಶನವನ್ನು ಇಡೀ ದಿನದ ಮಟ್ಟಿಗೆ ಮುಂದೂಡಲಾಗಿದೆ. ಹವಾಮಾನ ಇಲಾಖೆಯು ಮುಂಬೈ ಸೇರಿದಂತೆ ಪ್ರಮುಖ ಭಾಗಗಳಲ್ಲಿ ತೀವ್ರ ಮಳೆಯ ಮುನ್ಸೂಚನೆ ನೀಡಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಕಲಾಪವನ್ನು ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದರು.
ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಭಾರತೀಯ ಹವಾಮಾನ ಇಲಾಖೆಯು ಮುಂಬೈ, ಠಾಣೆ ಮತ್ತು ರಾಯಗಢ್ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಜಾರಿಗೊಳಿಸಿದೆ. ಗಂಟೆಗೆ 70 ರಿಂದ 90 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ.



