July 6, 2026
Monday, July 6, 2026
spot_img

ಬಾಗಲಕೋಟೆಯಲ್ಲಿ ಸರ್ಕಾರಿ ಶಾಲೆಯ ಗೇಟ್ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರಿ ಶಾಲೆಯ ಮುಖ್ಯದ್ವಾರದ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿಯನ್ನು ನಯನಾ ಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ಮೇಲೆ ಶಾಲೆಯ ಮುಖ್ಯ ದ್ವಾರದ ಗೇಟ್ ಕುಸಿದು ಬಿದ್ದ ನಂತರ ತೀವ್ರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ಮೂಗಿಗೆ ಬಲವಾದ ಪೆಟ್ಟು ಬಿದ್ದಿದ್ದು,‌ ಕಿವಿಯಿಂದಲೂ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ.

ಆಕೆಯನ್ನು ಮೊದಲಿಗೆ ಇಳಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಇತರ ವಿದ್ಯಾರ್ಥಿಗಳು ಇಳಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ ಕಟ್ಟಡ ಹಾಗೂ ಗೇಟ್‌ ಈ ರೀತಿ ಇದ್ದು, ಇದು ಒಂದಲ್ಲಾ ಒಂದು ದಿನ ಸಮಸ್ಯೆ ತಂದಿಡುತ್ತದೆ ಎಂದು ಗೊತ್ತಿದ್ದರೂ ಇದನ್ನು ಯಾರೂ ಸರಿಪಡಿಸಿಲ್ಲ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !