ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿರುವುದನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಪ್ರತಿಭಟನೆ ನಡೆಸಬೇಕಾದರೆ ನಿಗದಿತ ಸ್ಥಳಗಳಲ್ಲೇ ನಡೆಸಬೇಕು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಡ್ಡಿಯಾಗಬಾರದು ಎಂದು ಅವರು ಅಭಿಪ್ರಾಯಪಟ್ಟರು.
300 ಕೋಟಿ ಆರೋಪಕ್ಕೆ ಪ್ರತಿಕ್ರಿಯೆ
ತಮ್ಮ ವಿರುದ್ಧ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅಧಿಕೃತ ನೋಟಿಸ್ ಬಂದಿಲ್ಲ ಎಂದು ಹೇಳಿದ ಅವರು, ಅಗತ್ಯವಿದ್ದಾಗ ಕಾನೂನುಬದ್ಧವಾಗಿ ಉತ್ತರ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ವಿರುದ್ಧದ ದೂರು ರಾಜಕೀಯ ಉದ್ದೇಶದಿಂದ ನೀಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.
ಇದನ್ನೂ ಓದಿ:
ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರಶ್ನೆ
ಇದೇ ವೇಳೆ, ಪ್ರತಿಭಟನೆಗಳಿಗೆ ಅನುಮತಿ ನೀಡಿರುವ ಕುರಿತು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಿಲುವನ್ನು ಪ್ರಶ್ನಿಸಿದ ಅವರು, ಇಂತಹ ಬೆಳವಣಿಗೆಗಳು ಮುಂದುವರಿದರೆ ತಮ್ಮ ಪಕ್ಷವೂ ಪ್ರತಿಭಟನೆಯ ಮಾರ್ಗ ಹಿಡಿಯಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.



