August 27, 2026
Thursday, August 27, 2026
spot_img

ಭಾರೀ ಮಳೆಯಿಂದ ಕೋರ್ಟ್‌ಗೆ ಬರಲಾಗದ ವಕೀಲರಿಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದ ವಕೀಲರ ವಿರುದ್ಧ ಯಾವುದೇ ಪ್ರತಿಕೂಲ ಆದೇಶ ನೀಡುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಹವಾಮಾನ ವೈಪರೀತ್ಯದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಂಬೈನಲ್ಲಿ ರೆಡ್ ಅಲರ್ಟ್ ಮುಂದುವರಿಕೆ

ಮುಂಬೈ, ಥಾಣೆ ಹಾಗೂ ರಾಯಗಢ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಅನಗತ್ಯ ಸಂಚಾರ ತಪ್ಪಿಸುವಂತೆ ಸೂಚಿಸಿದೆ. ಇದೇ ಕಾರಣದಿಂದ ನ್ಯಾಯಾಲಯಕ್ಕೆ ಬರಲು ಸಾಧ್ಯವಾಗದಿದ್ದರೆ ಪ್ರಕರಣಗಳಿಗೆ ಹಾನಿಯಾಗುವುದಿಲ್ಲ ಎಂದು ನ್ಯಾಯಪೀಠ ಭರವಸೆ ನೀಡಿದೆ.

ಇದನ್ನೂ ಓದಿ:

ಸಂಚಾರ, ಶಾಲೆಗಳ ಮೇಲೆ ಮಳೆಯ ಪರಿಣಾಮ

ಇತ್ತ ಭಾರೀ ಮಳೆಯ ಪರಿಣಾಮ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೈಲು ಮತ್ತು ವಿಮಾನ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದ್ದು, ಹಲವು ಸೇವೆಗಳು ರದ್ದಾಗಿವೆ ಹಾಗೂ ನೂರಾರು ವಿಮಾನಗಳ ಸಂಚಾರ ವಿಳಂಬವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !