July 6, 2026
Monday, July 6, 2026
spot_img

ಶ್ರೀಲಂಕಾ ಜೈಲಿನಲ್ಲಿ ಮಾರಾಮಾರಿ: ಗ್ಯಾಂಗ್ ವಾರ್ ಗೆ 25 ಕೈದಿಗಳು ಬ*ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾದ ನೆಗೊಂಬೊ ಜೈಲಿನಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 25 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಕೈದಿಗಳು ಗಾಯಗೊಂಡಿದ್ದಾರೆ.

ಭಾನುವಾರ ಆರಂಭವಾದ ಈ ಗಲಾಟೆ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗಿದೆ. ಘಟನೆಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.

ಘಟನೆಯ ಬಳಿಕ ಜೈಲಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು, ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !