October 15, 2026
Thursday, October 15, 2026
spot_img

ರಿಪ್ಪನ್‌ಪೇಟೆಯಲ್ಲಿ ಮನಕಲಕುವ ಘಟನೆ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ

ಹೊಸದಿಗಂತ ವರದಿ ಶಿವಮೊಗ್ಗ :

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗವಟೂರು ಹೊಳೆ ಸಮೀಪದ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಮಗುವನ್ನು ಚೀಲದಲ್ಲಿ ಕಟ್ಟಿ, ಬಾಯಿಗೆ ಫೀಡಿಂಗ್ ಬಾಟಲ್ ಇಟ್ಟು ಹೋಗಿರುವ ಅಮಾನವೀಯ ಘಟನೆ ನಡೆದಿದೆ.

ಭಾನುವಾರ ರಾತ್ರಿ ಬಸ್ ನಿಲ್ದಾಣದ ಬಳಿ ಸಾಗುತ್ತಿದ್ದ ದಾರಿಹೋಕರಿಗೆ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ, ಚೀಲದೊಳಗೆ ನವಜಾತ ಹೆಣ್ಣು ಮಗು ಇರುವುದನ್ನು ಕಂಡು ಬೆಚ್ಚಿಬಿದ್ದರು. ಕೂಡಲೇ ರಿಪ್ಪನ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಿಎಸ್ಐ ರಾಜು ರೆಡ್ಡಿ ಮತ್ತು ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ರಾತ್ರಿ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ:

ಆಂಬ್ಯುಲೆನ್ಸ್ ಮೂಲಕ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಗತ್ಯ ಚಿಕಿತ್ಸೆ ನೀಡಿದ್ದಾರೆ. ವೈದ್ಯರ ಪ್ರಾಥಮಿಕ ಪರೀಕ್ಷೆಯಲ್ಲಿ ಮಗು ಆರೋಗ್ಯವಾಗಿರುವುದು ತಿಳಿದುಬಂದಿದೆ. ಹೆಚ್ಚಿನ ಆರೈಕೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Must Read