October 15, 2026
Thursday, October 15, 2026
spot_img

ಅಪ್ರಾಪ್ತ ವಯಸ್ಕ ಬಾಲಕಿಯ ಅಪಹರಣ, ಲೈಂಗಿಕ ದೌರ್ಜನ್ಯ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ ಮುಂಡಗೋಡ:

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನ ವಿರುದ್ದ ಪೋಕ್ಸೋ ಮತ್ತು ಬಿ.ಎನ್.ಎಸ್ ಕಾಯ್ದೆಯಡಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಇಂದೂರ ಗ್ರಾಮದ ಮಂಜುನಾಥ ಎಂಬಾತನೇ ಆರೋಪಿ.

ಇನ್ಸ್ಟಾ ಗ್ರಾಮ್ ನಲ್ಲಿ ಪರಿಚಯವಾಗಿದ್ದ ಕಲಘಟಗಿ ತಾಲೂಕಿನ ಬಾಲಕಿಯೊಂದಿಗೆ ಸಲುಗೆಯಿಂದ ಇದ್ದು ಜೂ.14ರಂದು ಪಟ್ಟಣದ ಫಾರೆಸ್ಟ್ ಗಾರ್ಡನ್‌ನಲ್ಲಿ ಕರೆಯಿಸಿಕೊಂಡು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಜು.2ರಂದು ಬಾಲಕಿಯನ್ನು ಮನೆಯಿಂದ ಅಪಹರಣ ಮಾಡಿಕೊಂಡು ತನ್ನ ಬೈಕ್ ಮೇಲೆ ಕರೆದುಕೊಂಡು ಹೋಗಿ ಮುಂಡಗೋಡದಿಂದ ಹುಬ್ಬಳ್ಳಿ ಮತ್ತು ಗೋವಾಕ್ಕೆ ಕರೆದುಕೊಂಡು ಹೋಗಿ ಗೋವಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ಕುಟುಂಬದವರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Must Read