July 6, 2026
Monday, July 6, 2026
spot_img

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ಅಸ್ಸಾಂ ರೈಫಲ್ಸ್‌ನ ಇಬ್ಬರು ಯೋಧರು ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮೇಲೆ ನಡೆದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 202ರಲ್ಲಿ ಬೆಂಗಾವಲು ಕಾರ್ಯಾಚರಣೆ ವೇಳೆ ಹೊಂಚು ಹಾಕಿದ್ದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಶೋಧ ಕಾರ್ಯಾಚರಣೆ ತೀವ್ರ

ದಾಳಿಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ. ಕೆಲಕಾಲ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಕಠಿಣ ಕ್ರಮದ ಭರವಸೆ

ಘಟನೆಯನ್ನು ಮಣಿಪುರ ಸರ್ಕಾರ ತೀವ್ರವಾಗಿ ಖಂಡಿಸಿದೆ. ದಾಳಿಗೆ ಹೊಣೆಗಾರರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಇಲಾಖೆ ಸ್ಪಷ್ಟಪಡಿಸಿದ್ದು, ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !