September 5, 2026
Saturday, September 5, 2026
spot_img

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ, ಉಡುಪಿ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರಾವಳಿ ಮತ್ತೆ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಬೀಳುತ್ತಿದ್ದು, ಹವಾಮಾನ ಇಲಾಖೆ ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ತೀರದಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರೊಂದಿಗೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !