ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಪ್ಪತ್ತು ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚಿಕ್ಕಬಾಣಾವಾರ ಮೂಲದ ತೇಜು ಮೃತರು. ಸದಾಶಿವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.
ಸಾಯುವ ನಿರ್ಧಾರಕ್ಕೂ ಮುನ್ನ ತೇಜು ತನ್ನ ಸ್ನೇಹಿತನೊಬ್ಬನಿಗೆ ಈ ಜೀವನ ನನಗೆ ಸಾಕಾಗಿದೆ ಎನ್ನುವ ಸಂದೇಶವನ್ನು ಕಳುಹಿಸಿ ಫೋನ್ ಸ್ವಿಚ್ ಆಫ್ ಮಾಡಿದ್ದಾಳೆ. ಮೇಲ್ನೋಟಕ್ಕೆ ಇದು ಪ್ರೀತಿಯ ವಿಚಾರದ ಜಗಳದಂತೆ ಕಾಣಿಸುತ್ತಿದೆ.
ನಿನ್ನೆಯೇ ತೇಜು ಕೆರೆಗೆ ಹಾರಿ ಪ್ರಾಣಬಿಟ್ಟಿದ್ದು, ಇಂದು ಮೃತದೇಹ ಸಿಕ್ಕಿದೆ. ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



