ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೇಂದ್ರ ಕಚೇರಿಗೆ ಇಂದು ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಕೇವಲ ನಾಲ್ಕು ದಿನಗಳ ಅವಧಿಯಲ್ಲಿ ಇಸ್ರೋ ಸಂಸ್ಥೆಗೆ ಬಂದಿರುವ ಮೂರನೇ ಬೆದರಿಕೆ ಇಮೇಲ್ ಇದಾಗಿದೆ. ಇಂಗ್ಲಿಷ್‌ನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ಸ್ಥಳಕ್ಕೆ ತಕ್ಷಣವೇ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಹಾಗೂ ಕೈಗಾರಿಕಾ ಭದ್ರತಾ ಪಡೆ, ಸಂಜಯನಗರ ಪೊಲೀಸರು ಆಗಮಿಸಿಇಸ್ರೋದ ಆವರಣ ಮತ್ತು ಅಂತಾರಿಕ್ಷ ಭವನ ಸೇರಿದಂತೆ ಸಂಪೂರ್ಣ ಪ್ರದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.
ಹಲವು ಗಂಟೆಗಳ ಶೋಧದ ಬಳಿಕ ಯಾವುದೇ ಸ್ಫೋಟಕ ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದರು.



