July 7, 2026
Tuesday, July 7, 2026
spot_img

ಪ್ರಧಾನಿ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವ ಬಿಂಟಾಂಗ್ ಆದಿಪೂರ್ಣ ಪ್ರದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ‘ಬಿಂಟಾಂಗ್ ಆದಿಪೂರ್ಣ’ ಪದಕವನ್ನು ನೀಡಿ ಗೌರವಿಸಲಾಗಿದೆ.

ಜಕಾರ್ತಾದಲ್ಲಿ ನಡೆದ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ ಮೋದಿಗೆ ಮೆಡಲ್‌ ಆಫ್‌ ಆನರ್‌ ನೀಡಿ ಗೌರವಿಸಿದರು. ಇಂಡೋನೇಷ್ಯಾ ಗಣರಾಜ್ಯದ ಏಕತೆ, ನಿರಂತರತೆ ಮತ್ತು ಸಮೃದ್ಧಿಗೆ ಅಸಾಧಾರಣ ಸೇವೆ ಸಲ್ಲಿಸಿದ ಜಾಗತಿಕ ನಾಯಕರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇಸ್ತಾನಾ ಮೆರ್ಡೆಕಾದಲ್ಲಿ ಭವ್ಯ ಸ್ವಾಗತ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತವಾಗಿ ಇಂಡೋನೇಷ್ಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಜಕಾರ್ತಾದ ಅಧ್ಯಕ್ಷೀಯ ಭವನವಾದ ‘ಇಸ್ತಾನಾ ಮೆರ್ಡೆಕಾ’ದಲ್ಲಿ ಸಾಂಪ್ರದಾಯಿಕ ಹಾಗೂ ಅತ್ಯಂತ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಈ ವೇಳೆ ಪ್ರಧಾನಿಯವರು ಅಲ್ಲಿನ ಅತಿಥಿ ಪುಸ್ತಕದಲ್ಲಿ ಸಹಿ ಹಾಕಿದರು.

2025ರ ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಸುಬಿಯಾಂಟೊ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಅದಾದ ಬಳಿಕ ಉಭಯ ದೇಶಗಳ ನಡುವೆ ನಡೆಯುತ್ತಿರುವ ಮೊದಲ ಪ್ರಮುಖ ದ್ವಿಪಕ್ಷೀಯ ಭೇಟಿ ಇದಾಗಿದೆ. ಭಾರತದ ‘ಆಕ್ಟ್ ಈಸ್ಟ್’ ನೀತಿ ಮತ್ತು ಮಹಾಸಾಗರ್ ದೃಷ್ಟಿಕೋನವನ್ನು ಬಲಪಡಿಸಲು ಈ ಪ್ರವಾಸ ಸಹಕಾರಿಯಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !