ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮಶ್ರೀ ಪುರಸ್ಕೃತ, ದೇಶಾದ್ಯಂತ ತೂಗು ಸೇತುವೆಗಳ ಸರದಾರ ಎಂದೇ ಖ್ಯಾತಿ ಪಡೆದ ಗಿರೀಶ್ ಭಾರದ್ವಾಜ್ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ.
ಗಿರೀಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸರ್ಕಾರ ಅವರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಆದೇಶಿಸಿದೆ.
ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಗಿರೀಶ್ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ತೀವ್ರ ಅಸ್ವಸ್ಥರಾಗಿದ್ದು, ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.



