ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡ್‌ನ ಮೆಪ್ಪಾಡಿ ಸಮೀಪ ಸುರಂಗ ರಸ್ತೆ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ಜೂನ್ 20ರಂದೇ ಮಣ್ಣು ತೆರವುಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿತ್ತು. ಆದರೆ ಆ ಆದೇಶವನ್ನು ಪಾಲಿಸದಿರುವುದು ದುರಂತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಆರೋಪಿಸಿದರು.
ರಕ್ಷಣಾ ಕಾರ್ಯಾಚರಣೆ ಭರದಿಂದ
ಭೂಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದು, ಏಳು ಮಂದಿ ಕಾಣೆಯಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಏಳು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿಧ ರಕ್ಷಣಾ ತಂಡಗಳು ಸ್ಥಳದಲ್ಲಿ ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
ಇದನ್ನೂ ಓದಿ:
‘ಮಾನವ ನಿರ್ಮಿತ ದುರಂತ’ ಆರೋಪ
ಕಂದಾಯ ಸಚಿವ ಟಿ. ಸಿದ್ದೀಕ್ ಕೂಡ ಈ ಘಟನೆ ಸಹಜ ಪ್ರಕೃತಿ ವಿಕೋಪವಲ್ಲ, ಕಾಮಗಾರಿ ವೇಳೆ ಮಣ್ಣನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಿದ ಪರಿಣಾಮ ಉಂಟಾದ ಮಾನವ ನಿರ್ಮಿತ ದುರಂತ ಎಂದು ಹೇಳಿದ್ದಾರೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಯುತ್ತಿದ್ದು, ಹೊಣೆಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.



