September 14, 2026
Monday, September 14, 2026
spot_img

ಬ್ಯುಸಿ ವೇಳಾಪಟ್ಟಿಯಿಂದ ಗಂಭೀರ್ ಔಟ್: ಯುವ ಪಡೆಯೊಂದಿಗೆ ಲಕ್ಷ್ಮಣ್ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಕ್ರಿಕೆಟ್ ತಂಡಕ್ಕೆ ಮುಂದಿನ ತಿಂಗಳುಗಳಿಂದ ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿ ಎದುರಾಗಿರುವ ಹಿನ್ನೆಲೆಯಲ್ಲಿ, ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ.

ಝಿಂಬಾಬ್ವೆ ಪ್ರವಾಸದಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಬದಲಿಗೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ತಂಡದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಗಂಭೀರ್‌ಗೆ ವಿಶ್ರಾಂತಿ

ಇಂಗ್ಲೆಂಡ್ ಸರಣಿ ಬಳಿಕ ಭಾರತ ತಂಡ ಸತತ ಸರಣಿ ಹಾಗೂ ಟೂರ್ನಿಗಳಲ್ಲಿ ಭಾಗವಹಿಸಲಿರುವುದರಿಂದ ಕೋಚಿಂಗ್ ಸಿಬ್ಬಂದಿಗೆ ಕೆಲಸದ ಒತ್ತಡ ಕಡಿಮೆ ಮಾಡಲು ಬಿಸಿಸಿಐ ಈ ಕ್ರಮ ಕೈಗೊಂಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಗಂಭೀರ್ ಹಿರಿಯ ತಂಡದೊಂದಿಗೆ ಇರಲಿದ್ದು, ಝಿಂಬಾಬ್ವೆ ಪ್ರವಾಸಕ್ಕೆ ತೆರಳುವುದಿಲ್ಲ.

ಲಕ್ಷ್ಮಣ್‌ಗೆ ಯುವ ತಂಡದ ಹೊಣೆ

ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಝಿಂಬಾಬ್ವೆ ಪ್ರವಾಸ ಹಾಗೂ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಯುವ ತಂಡಕ್ಕೆ ಮುಖ್ಯ ಕೋಚ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ. ಅವರೊಂದಿಗೆ ಹೃಷಿಕೇಶ್ ಕಾನಿಟ್ಕರ್ ಬ್ಯಾಟಿಂಗ್ ಕೋಚ್ ಹಾಗೂ ಸುನಿಲ್ ಜೋಶಿ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ:

ಏಷ್ಯನ್ ಗೇಮ್ಸ್‌ಗೆ ಬಲಿಷ್ಠ ಪಡೆ

ಹಿರಿಯ ಆಟಗಾರರು ವೆಸ್ಟ್ ಇಂಡೀಸ್ ಸರಣಿಯಲ್ಲಿ ನಿರತರಾಗಿರುವ ಕಾರಣ, ಏಷ್ಯನ್ ಗೇಮ್ಸ್‌ಗೆ ಯುವ ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಲಿದ್ದು, ತಿಲಕ್ ವರ್ಮಾ ಉಪನಾಯಕರಾಗಿದ್ದಾರೆ. ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್‌ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ ಹಾಗೂ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !