September 17, 2026
Thursday, September 17, 2026
spot_img

NEET ಪರೀಕ್ಷೆ ಮುಕ್ತಾಯ: ಜಿರಳೆ ಪಾರ್ಟಿ X ಖಾತೆ ಅನ್‌ಬ್ಲಾಕ್‌ಗೆ ದೆಹಲಿ ಹೈಕೋರ್ಟ್ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕಾಕ್ರೋಚ್‌ ಜನತಾ ಪಾರ್ಟಿ’ (CJP)ಯ ಎಕ್ಸ್ (X) ಖಾತೆಯ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ನ್ಯಾಯಮೂರ್ತಿ ಸ್ವರ್ಣಕಾಂತಾ ಶರ್ಮಾ ಈ ನಿರ್ದೇಶನ ನೀಡಿದರು.

ತಾತ್ಕಾಲಿಕವಾಗಿ ನಿರ್ಬಂಧ

ಕೇಂದ್ರ ಸರ್ಕಾರದ ಪರ ವಾದಿಸಿದ ತುಷಾರ್ ಮೆಹ್ತಾ, NEET ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟುಮಾಡುವ ಪೋಸ್ಟ್‌ಗಳು ಹರಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಇದೀಗ ಪರೀಕ್ಷೆ ಪೂರ್ಣಗೊಂಡಿರುವುದರಿಂದ ಖಾತೆ ಪುನಃ ತೆರೆಯಲು ಸರ್ಕಾರಕ್ಕೆ ಆಕ್ಷೇಪವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:

ರಾಷ್ಟ್ರೀಯ ಭದ್ರತೆಯ ಕಾರಣ

CJP ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರು ಸರ್ಕಾರದ ನಿರ್ಬಂಧ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆರಂಭದಲ್ಲಿ ರಾಷ್ಟ್ರೀಯ ಭದ್ರತೆಯ ಕಾರಣ ಉಲ್ಲೇಖಿಸಿ ಖಾತೆ ಬಂದ್ ಮಾಡಲಾಗಿತ್ತು.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಾತ್ಮಕ ಅಭಿಯಾನವಾಗಿ ಗಮನಸೆಳೆದಿದ್ದ CJP, NEET ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಸಂಬಂಧಿತ ವಿಚಾರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೂ ಆಗ್ರಹಿಸಿತ್ತು. ನ್ಯಾಯಾಲಯದ ಆದೇಶದೊಂದಿಗೆ ಇದೀಗ CJPಯ ಎಕ್ಸ್ ಖಾತೆ ಮತ್ತೆ ಸಕ್ರಿಯವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !