July 7, 2026
Tuesday, July 7, 2026
spot_img

ಕಳಸದಲ್ಲಿ ಭೀಕರ ದುರಂತ: ಕಾಡುಕೋಣ ದಾಳಿ ಮತ್ತೊಂದು ಜೀವ ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ತೋಟದ ಕಾರ್ಮಿಕರ ಜೀವಕ್ಕೆ ಯಾವುದೇ ಗ್ಯಾರಂಟಿ ಇಲ್ಲದಂತಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಕಾಡುಕೋಣವೊಂದು ಭೀಕರವಾಗಿ ದಾಳಿ ನಡೆಸಿ ಕೊಂದಿರುವ ದಾರುಣ ಘಟನೆ ನಡೆದಿದೆ.

ಬಿಳಗುಳಿ ಗ್ರಾಮದ ನಿವಾಸಿಯಾದ ಶೀಲಾ (52) ಮೃತಪ ದುರ್ದೈವಿ. ಇವರು ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಒಂಟಿ ಕಾಡುಕೋಣವೊಂದು ಏಕಾಏಕಿ ಇವರ ಮೇಲೆ ನುಗ್ಗಿ ದಾಳಿ ಮಾಡಿದೆ. ಕಾಡುಕೋಣವು ತನ್ನ ಕೊಂಬುಗಳಿಂದ ಮಹಿಳೆಯ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಬಲವಾಗಿ ಇರಿದ ಪರಿಣಾಮವಾಗಿ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಮಾರ್ಗಮಧ್ಯೆಯೇ ಸಾವು

ಜಮೀನಿನಲ್ಲಿದ್ದ ಸ್ಥಳೀಯರು ತಕ್ಷಣವೇ ಓಡಿ ಬಂದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ, ಅತಿಯಾದ ರಕ್ತಸ್ರಾವವಾದ ಕಾರಣ ಅವರು ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಗ್ರಾಮಸ್ಥರ ತೀವ್ರ ಆಕ್ರೋಶ

ಕಳಸ ಭಾಗದಲ್ಲಿ ಕಾಡುಕೋಣಗಳ ಹಾವಳಿ ನಿರಂತರವಾಗಿ ನಡೆಯುತ್ತಲೇ ಇದೆ. ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಮೈದಾಡಿಯ ಯಮಗೊಂಡ ಎಸ್ಟೇಟ್‌ನಲ್ಲಿ ಯುವಕನೊಬ್ಬ ಕಾಡುಕೋಣದ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದ. ಈಗ ಮತ್ತೆ ಮಹಿಳೆಯೊಬ್ಬರು ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಕಾಡುಪ್ರಾಣಿಗಳ ಉಪಟಳಕ್ಕೆ ಶಾಶ್ವತವಾಗಿ ಬ್ರೇಕ್ ಹಾಕಿ ತಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮಲೆನಾಡಿನ ಜನತೆ ಮತ್ತು ರೈತ ಸಂಘಟನೆಗಳು ಅರಣ್ಯ ಇಲಾಖೆಯನ್ನು ಆಗ್ರಹಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !