Tuesday, September 9, 2025

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಹೆಸರು : ಸಿಎಂ ಒಕೆ ಅಂದ್ರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಮೆಟ್ರೋ ನಿಲ್ದಾಣವೊಂದಕ್ಕೆ ಸೆಂಟ್ ಮೇರಿ ಹೆಸರಿಡಬೇಕೆಂದ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಕೆ ಎಂದಿದ್ದಾರೆ.

ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾಮಕರಣ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮ, ಸಂಸ್ಕೃತಿ ಇದೆ. ವಿವಿಧತೆಯಲ್ಲಿ ಏಕತೆ ಸಾಧಿಸಬೇಕು, ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ. ದಯೆಯಿಲ್ಲದ ಧರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ನಾವು ಪಾಲಿಸಬೇಕು. ಧಾರ್ಮಿಕ ಸಹಿಷ್ಣುತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ