July 8, 2026
Wednesday, July 8, 2026
spot_img

ತುಮಕೂರು ಸಣ್ಣ ನೀರಾವರಿ ಇಲಾಖೆ ಎಇಇ ಮನೆ ಮೇಲೆ ಲೋಕಾ ದಾಳಿ

ಹೊಸದಿಗಂತ ವರದಿ ತುಮಕೂರು:

ತುಮಕೂರಿನಲ್ಲಿ ಸಣ್ಣ ನೀರಾವರಿ ಇಲಾಖೆಯ ತಿಪಟೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಧುಸೂದನ್ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ:

ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಆರಂಭಿಸಿದರು. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಾಗಿದ್ದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಅಧಿಕಾರಿಗಳು ಮನೆ ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಚಿನ್ನಾಭರಣ, ನಗದು, ಬ್ಯಾಂಕ್ ಖಾತೆಗಳು ಹಾಗೂ ಇತರ ಆಸ್ತಿ ವಿವರಗಳ ಪರಿಶೀಲನೆ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಅಕ್ರಮ ಆಸ್ತಿಯ ಪ್ರಮಾಣದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !