Tuesday, September 9, 2025

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಬೇರೆ ಧಾನ್ಯ ವಿತರಣೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಸ್ಥಳೀಯವಾಗಿ ಬೆಳೆದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ವಿತರಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ ₹544 ಕೋಟಿ ಉಚಿತ ಟಿಕೆಟ್ ಪ್ರಯಾಣಿಕರಿಗೆ ರೂ.13,903 ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ