July 8, 2026
Wednesday, July 8, 2026
spot_img

ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ!

ಹೊಸದಿಗಂತ ವರದಿ ಬೀದರ್

ಬೀದರ್: ಶರಣರ ನಾಡು ಹಾಗೂ ವಿಶ್ವಗುರು ಬಸವಣ್ಣನವರ ಕರ್ಮಭೂಮಿಯಾದ ಬೀದರ್ ಜಿಲ್ಲೆಗೆ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ನಗರದ ವಾಲಿ ನಿಲಯದಲ್ಲಿ ಬೀದರ್ ಜಂಗ್ ಪತ್ರಿಕೆಯ ವತಿಯಿಂದ ಆತ್ಮೀಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ  ಬೀದರ್ ಜಂಗ್ ಪತ್ರಿಕೆಯ ಪ್ರಧಾನ ಸಂಪಾದಕರಾದ ದೀಪಕ್ ಶಿವಶರಣಪ್ಪ ವಾಲಿ ಹಾಗೂ ಯುವ ಉದ್ಯಮಿ ವಿವೇಕ್ ದೀಪಕ್ ವಾಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೈಗಾರಿಕಾ ಅಭಿವೃದ್ಧಿ, ನಗರ ಸೌಂದರ್ಯೀಕರಣ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವಂತೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ ಬೀದರ್ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಯಿತು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಬದ್ಧವಾಗಿದ್ದು, ಜಿಲ್ಲೆಯ ಅಗತ್ಯ ಯೋಜನೆಗಳಿಗೆ ಆದ್ಯತೆ ನೀಡಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ:

ಕಾರ್ಯಕ್ರಮದಲ್ಲಿ ಸಚಿವ ಈಶ್ವರ್ ಖಂಡ್ರೆ, ಶಾಸಕ ರಹೀಂ ಖಾನ್, ವಾಲಿ ಕುಟುಂಬದ ಸದಸ್ಯರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !