July 8, 2026
Wednesday, July 8, 2026
spot_img

ಎಂಎಸ್‌ಪಿ ನೂರಾರು ಕೋಟಿ ಹಣ ಬಿಡುಗಡೆಗೆ ರಾಜ್ಯದ ಒತ್ತಡ: ಕೇಂದ್ರ ಆಹಾರ ಸಚಿವರಿಗೆ ಮುನಿಯಪ್ಪ ವಿಶೇಷ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ರೈತರಿಗೆ ಸಂಬಂಧಿಸಿದ ಪ್ರಮುಖ ಹಣಕಾಸಿನ ನೆರವಿಗಾಗಿ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಇಂದು ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಹ್ಲಾದ್ ಜೋಶಿಗೆ ರಾಜ್ಯದ ಬಾಕಿ ಹಣದ ಕುರಿತು ಸಚಿವರು ಸವಿಸ್ತಾರವಾದ ಮನವಿ ಪತ್ರ ಸಲ್ಲಿಸಿದ್ದಾರೆ.

ವಿಕೇಂದ್ರೀಕೃತ ಧಾನ್ಯ ಸಂಗ್ರಹಣೆ ಯೋಜನೆಯಡಿ ರಾಜ್ಯ ಸರ್ಕಾರ ರೈತರಿಂದ ಖರೀದಿಸಿದ ಭತ್ತ ಮತ್ತು ರಾಗಿಗೆ ಸಂಬಂಧಿಸಿದಂತೆ ಕೇಂದ್ರದಿಂದ ಬರಬೇಕಾದ ಕನಿಷ್ಠ ಬೆಂಬಲ ಬೆಲೆಯ (MSP) ನೂರಾರು ಕೋಟಿ ರೂ. ಬಾಕಿ ಮೊತ್ತವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಒತ್ತಾಯಿಸಲಾಗಿದೆ. ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಹಾಗೂ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಆಹಾರ ಧಾನ್ಯಗಳ ಪೂರೈಕೆ ಕುರಿತಾಗಿಯೂ ಈ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಸಕಾರಾತ್ಮಕ ಸ್ಪಂದನೆ:

ರಾಜ್ಯದ ನಿಯೋಗದ ಮನವಿಯನ್ನು ಆಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶ, ಅಗತ್ಯ ದಾಖಲೆಗಳು ಹಾಗೂ ಲೆಕ್ಕಾಚಾರಗಳನ್ನು ಪರಿಶೀಲಿಸಿ ಬಾಕಿ ಇರುವ ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ವೇಳೆ ರಾಜ್ಯ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !