July 9, 2026
Thursday, July 9, 2026
spot_img

ದಾದಾಗೆ ICC ಗೌರವ: ಹಾಲ್ ಆಫ್ ಫೇಮ್‌ನಲ್ಲಿ ಸೌರವ್ ಗಂಗೂಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ 54ನೇ ಹುಟ್ಟುಹಬ್ಬದಂದು ಮತ್ತೊಂದು ಐತಿಹಾಸಿಕ ಗೌರವ ದೊರೆತಿದೆ. ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೋಘ ಕೊಡುಗೆಯನ್ನು ಗುರುತಿಸಿ ಅವರನ್ನು ಐಸಿಸಿ ಹಾಲ್ ಆಫ್ ಫೇಮ್ ಪಟ್ಟಿಗೆ ಸೇರಿಸಲಾಗಿದೆ.

ಭಾರತದ 12ನೇ ಕ್ರಿಕೆಟಿಗ

ಗಂಗೂಲಿ ಈ ಗೌರವ ಪಡೆದ 12ನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರಲ್ಲಿ 10 ಪುರುಷ ಮತ್ತು 2 ಮಹಿಳಾ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ:

ನಾಯಕತ್ವಕ್ಕೆ ವಿಶ್ವದ ಮೆಚ್ಚುಗೆ

ಟೀಮ್ ಇಂಡಿಯಾದ ನಾಯಕನಾಗಿ ಗಂಗೂಲಿ ಹಲವು ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದರು. ಎಂಎಸ್ ಧೋನಿ, ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್, ಜಹೀರ್ ಖಾನ್ ಸೇರಿದಂತೆ ಹಲವು ಆಟಗಾರರ ಬೆಳವಣಿಗೆಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.

ಐಸಿಸಿಗೆ ಧನ್ಯವಾದ

ಈ ಗೌರವದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗಂಗೂಲಿ, ಐಸಿಸಿ ಹಾಗೂ ಅಧ್ಯಕ್ಷ ಜಯ್ ಶಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಭಾರತದ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !